Friday, October 9, 2009

joteyali jote joteyali - Geeta

ಚಿತ್ರ: ಗೀತ
ಹಾಡಿದವರು: ಎಸ್ ಪಿ ಬಾಲು, ಎಸ್ ಜಾನಕಿ
ನಟರು: ಶಂಕರ್ ನಾಗ್

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
ಓ....ಎಂತ ಮಾತಾಡಿದೆ ಇಂದು ನೀ
ಎಂತ ಮಾತಾಡಿದೆ, ನನ್ನ ಮನಸಿನ ಭಾವನೆ ನೀನೆ ಹೇಳಿದೆ

ಪ್ರೀತಿಯೆಂದರೇನು ಎಂದು ಈಗ ಅರಿತೆನು
ಸವಿನುಡಿಯಲಿ ತನು ಅರಳಿತು ಸವಿಗನಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ ಕರಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ.....

ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನ ಬಿಲ್ಲೇರುವ ಜಾರುತ ನಾವಾಡುವ
ಹಗಲು ಇರುಳು ಒಂದಾಗಿ ಹಾಡುವ.....

1 comment:

subramanya mallela said...

ನಮಸ್ಕಾರ,
ಮುತ್ತಿನಂತಹ ನಿಮ್ಮ ಕನ್ನಡ ನುಡಿಗಳಿಗೆ ನನ್ನ ನಮನ.

ಕನ್ನಡ ಲಿಪಿಯಲ್ಲಿ ಈ ಹಾಡು ಇದ್ರೆ ಹಚ್ಚಿಯಲ್ಲ. .

ಮನಸ್ಸೇ ಓ ಮನಸ್ಸೇ
"ಚಂದ್ರ ಮುಖಿ ಪ್ರಾಣ ಸಖಿ ಸಿನಿಮಾದ್ದು".
subbu-7899746623